ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರ್ ಶೃದ್ಧಾಂಜಲಿ ಸಭೆ
ಉಡುಪಿ ಜು.30: ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ದ.ಕ.ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ರವರಿಗೆ ಶೃದ್ಧಾಂಜಲಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆಸಲಾಯಿತು.
ಸಭೆಯಲ್ಲಿ ಶಾಸಕರಾದ ಕೆ.ರಘುಪತಿ ಭಟ್ ಅವರು ಭಾಗವಹಿಸಿ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ಗೀತಾಂಜಲಿ ಸುವರ್ಣ, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷ ಹೆರ್ಗ ದಿನಕರ್ ಶೆಟ್ಟಿ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.