ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ- ಎಬಿವಿಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು ಜು.30: ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಇಂದು ಮುತ್ತಿಗೆ ಹಾಕಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಹಾಗೂ ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು. ಸ್ಥಳಕ್ಕೆ ಗೃಹ ಸಚಿವರು ಬರುವಂತೆ ಪಟ್ಟು ಹಿಡಿದಿದ್ದರು.

ಈ ವೇಳೆ ಪೊಲೀಸರ ಜೊತೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದು, ನಿವಾಸದ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ತಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!