ಮಂಗಳೂರು ಶಾಂತಿ ಸಭೆಯಲ್ಲಿ ಬಹುತೇಕ ಹಿಂದೂ, ಮುಸ್ಲಿಂ ಹಾಗೂ ಸಂಘಟನೆಗಳ ನಾಯಕರ ಗೈರು
ಮಂಗಳೂರು, ಜು.30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾ ಮಟ್ಟದ ಶಾಂತಿ ಸಭೆ ನಡೆಸಲಾಯಿತು.
ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ. ಅವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಯುತ್ತಿದ್ದು, ಶಾಂತಿ ಸಭೆಯಲ್ಲಿ ಬಹುತೇಕ ಹಿಂದೂ, ಮುಸ್ಲಿಂ ಹಾಗೂ ಸಂಘಟನೆಗಳ ನಾಯಕರ ಗೈರಾಗಿದ್ದರು. ಹಾಗೂ ಸಭೆಯ ಮುಂದಾಳತ್ವ ವಹಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೂಡಾ ಸಭೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇನ್ನು ಸಭೆಯು ಕೆಲ ಪಕ್ಷಗಳ ಬೆರಳೆಣಿಕೆಯ ಮುಖಂಡರ ಉಪಸ್ಥಿತಿಯಲ್ಲಿ ನಡೆದಿದ್ದು, ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ದೇವಜ್ಯೋತಿ ರೇ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಿದ್ದರು.