ಕರ್ನಾಟಕ ರಾಷ್ಟ್ರ ಸಮಿತಿ: ರಾಜ್ಯ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಶಾಹಿದ್ ಅಲಿ

ಉಡುಪಿ (ಉಡುಪಿ ಟೈಮ್ಸ್ ವರದಿ):  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಶಾಹಿದ್ ಅಲಿ ಉಡುಪಿ ಇವರನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣರೆಡ್ಡಿ ನೇಮಕಗೊಳಿಸಿದ್ದಾರೆ.


ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕವನ್ನು ಪುನಾರಚಿಸಲಾಗಿದ್ದು ಉಪಾಧ್ಯಕ್ಷರಾಗಿ ಪೌಲ್ ಮೆಲ್ಕಿಸಡೆಕ್, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಹನೀಫ್ ಚಿಕ್ಕಮಗಳೂರು ಇವರನ್ನು  ಕೆಆರ್ಎಸ್ ರಾಜ್ಯಾಧ್ಯಕ್ಷ ನೇಮಕಗೊಳಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.


ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದ ಶಾಹಿದ್ ಆಲಿ ಅವರನ್ನು ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರನ್ನಾಗಿ ಬಡ್ತಿ ನೀಡಲಾಗಿದ್ದು, ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ಸೂಚನೆಯಂತೆ ರಾಜ್ಯಾಧ್ಯಕ್ಷ ರವಿಕೃಷ್ಣರೆಡ್ಡಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!