ಮಲ್ಪೆ: ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್‌- ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ಹಲ್ಲೆ

ಮಲ್ಪೆ ಜು.31(ಉಡುಪಿ ಟೈಮ್ಸ್ ವರದಿ): ರಾಜಕೀಯ ನಾಯಕರೊಬ್ಬರ ವಿರುದ್ಧವಾಗಿ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ನಡೆದಿದೆ.

ಈ ಬಗ್ಗೆ ಹಲ್ಲೆಗೊಳಗಾದ ಹೂಡೆಯ ಬಿಜೆಪಿ ಕಾರ್ಯಕರ್ತ ಹರ್ಷವರ್ಧನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಜು.29 ರಂದು ರಾತ್ರಿ ಹರ್ಷವರ್ಧನ್ ಅವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ ಪ್ರಶಾಂತ್ ಕಾಂಚನ್ ಮತ್ತು ರೋಶನ್ ನೀನು ನಮ್ಮ ನಾಯಕರ ವಿರುದ್ದ ಬಾರಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿಯಾ ಎಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿರುವುದಾಗಿದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!