ಉಡುಪಿ: ಆ.1 ವೀರಶೈವ -ಲಿಂಗಾಯತ ಸಮುದಾಯ ಒಬಿಸಿ ಪಟ್ಟಿಗೆ ಆಗ್ರಹಿಸಿ ಬಹಿರಂಗ ಸಭೆ

ಉಡುಪಿ ಜು.31(ಉಡುಪಿ ಟೈಮ್ಸ್ ವರದಿ) : ವೀರಶೈವ-ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಒಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಆ.1 ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಉಡುಪಿ ಜಿಲ್ಲಾ ಉಸ್ತುವಾರಿ ಪದಾಧಿಕಾರಿ ಮನೋಹರ ಜಿ.ಅಬ್ಬಿಗೆರೆ ಅವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಬಹಿರಂಗ ಸಭೆಯಲ್ಲಿ ಪ್ರಮುಖ ಸಮಾಜದ ಮುಖಂಡರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ  ಸಮುದಾಯದ ಎಲ್ಲಾ ಪಂಗಡಗಳನ್ನು ಒಬಿಸಿ ವರ್ಗಕ್ಕೆ ಸೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಯುವ ವಿಭಾಗದ ಕೋಶಾಧ್ಯಕ್ಷ ಗೋವರ್ಧನ ಜಿ.ಸಿ, ಕಾರ್ಯದರ್ಶಿ ಅಕ್ಷತ್ ಎನ್.ಎಂ, ಸುರೇಶ್ ಎಸ್.ಕೆ, ಅಧ್ಯಕ್ಷ ಗಿರೀಶ್ ಕುಮಾರ ಪಾಂಗಳ, ಉಪಾಧ್ಯಕ್ಷ ಶಾಂತನ ಗೌಡರ್ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!