ಮಂಗಳೂರು: ಜಿಲ್ಲೆಯಲ್ಲಿನ ನಿರ್ಬಂಧ ಆ.3 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್ 3 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ