ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್: ಬಡ ವಿದ್ಯಾರ್ಥಿನಿಗೆ ಮೊಬೈಲ್ ವಿತರಣೆ

ಉಡುಪಿ : ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಡುಪಿಯ ಕಾಂಗ್ರೆಸ್ ಭವನದಲ್ಲಿ ಧೀಮಂತ ನಾಯಕದ್ವಯರಾದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧೀ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸ್ ಅವರ ಜನ್ಮದಿನಾಚರಣೆ ಪ್ರಯುಕ್ತ ಬೈಂದೂರು ಕಿರಿಮಂಜೇಶ್ವರದ ದೃಷ್ಟಿ ಹೀನ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿನಿ ಕು.ಮೇಘನಾ ಅವರಿಗೆ ಆನ್ ಲೈನ್ ತರಗತಿಗೆ ಸಹಾಯವಾಗುವಂತೆ ಒಂದು ಸ್ಮಾರ್ಟ್ ಫೋನ್ ಅನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ನೀಡಲಾಯಿತು. 


ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಗೀತಾ ವಾಗ್ಳೆಯವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್ ಅವರ ಆದೇಶದಂತೆ ದೇಶಾದ್ಯಂತ ಪ್ರತೀ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ಬಡತನದ ನಡುವೆ ದೃಷ್ಟಿದೋಷದ ಸಮಸ್ಯೆ ಯಿಂದ ಬಳಲುತ್ತಿದ್ದರೂ, ಅದನ್ನು ಮೆಟ್ಟಿನಿಂತು ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಮೇಘನಾ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ”ಎಂದರು.

ನಗರಸಭೆಯ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮೇಘನಾ ಅವರನ್ನು ಸಭೆಗೆ ಪರಿಚಯಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ ಶಾಲು ಹೊದಿಸಿ ಅಭಿನಂದಿಸಿದರು. ವೇದಿಕೆಯಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಆರ್ ಜಿ ಪಿ ಆರ್.ಎಸ್ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ಡಾ.ಸುನೀತಾ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಚಂದ್ರಿಕಾ ಶೆಟ್ಟಿ, ಸಂಧ್ಯಾ ಶೆಟ್ಟಿ, ಗೋಪಿ ನಾಯ್ಕ್, ಚಂದ್ರಾವತಿ ಭಂಡಾರಿ, ಸುಗಂಧೀ ಶೇಖರ್, ಸರಸು. ಡಿ.ಬಂಗೇರಾ, ರಾಜೀವಿ, ಜ್ಯೋತಿ ಮೆನನ್, ಪ್ರಮೀಳಾ ಜತ್ತನ್ನ, ಸುಮಾ ಸುರೇಂದ್ರ, ರಮಾದೇವಿ, ಎಂಎ ಗಫೂರ್, ಪ್ರಖ್ಯಾತ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಹರೀಶ್ ಕಿಣಿ, ಪ್ರಶಾಂತ್ ಜತ್ತನ್ನ, ಮುರಳೀ ಶಟ್ಟಿ, ಯತೀಶ್ ಕರ್ಕೇರಾ, ನರಸಿಂಹ ಮೂರ್ತಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!