ಹವಾಮಾನ ಇಲಾಖೆ ಲೆಕ್ಕ ತಪ್ಪಬಹುದು ಜೆಡಿಎಸ್’ನ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು- ಬಿಜೆಪಿ ವ್ಯಂಗ್ಯ-

ಬೆಂಗಳೂರು ಆ.1: ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು.ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ! ಒಂದೆಡೆ ಜನತಾ ಜಲಧಾರೆ ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ ಎಂದು ವ್ಯಂಗ್ಯವಾಡಿದೆ. 

Leave a Reply

Your email address will not be published. Required fields are marked *

error: Content is protected !!