ಉಡುಪಿ: ಸಿದ್ಧರಾಮೋತ್ಸವ ಯಶಸ್ವಿಗೊಳಿಸಲು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಕರೆ
ಉಡುಪಿ (ಉಡುಪಿ ಟೈಮ್ಸ್ ವರದಿ): ರಾಜ್ಯದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಅವರ ಅಭಿಮಾನಿ ಬಳಗ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ.
ಈ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಉಡುಪಿ ಜಿಲ್ಲಾ ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಕರೆ ನೀಡಿದೆ.
ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಕ್ಕೆ ಮಾತ್ರವಲ್ಲದೆ ಕರಾವಳಿ ಭಾಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ.
ನುಡಿದಂತೆ ನಡೆಯುವ ಮೂಲಕ ಚುನಾವಣಾ ಪೂರ್ವದಲ್ಲಿ ಘೋಷಿಸಿದ ಯೋಜನೆಗಳನ್ನು ನೂರು ಪ್ರತಿಶತ ಜಾರಿಗೊಳಿಸಿದ ಏಕೈಕ ರಾಜ್ಯವಾಗಿದೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಜಾತ್ಯತೀತ ನಾಯಕನಾಗಿ ಜಾತಿಮತ ಭೇದವಿಲ್ಲದೆ ಜನರ ಸೇವೆಯನ್ನು ಮಾಡಿದ್ದಾರೆ.
ಅನ್ನಭಾಗ್ಯ, ಕ್ಷೀರಭಾಗ್ಯ, ಆರೋಗ್ಯ ಭಾಗ್ಯ, ವಸತಿ ಭಾಗ್ಯ, ಇಂದಿರಾ ಕ್ಯಾಂಟೀನ್ ಸಹಿತ ಹತ್ತು ಹಲವು ಯೋಜನೆಗಳನ್ನು ರಾಜ್ಯದ ಜನತೆಗೆ ನೀಡಿರುವ ಸಿದ್ದರಾಮಯ್ಯ, ಕರಾವಳಿ ಜನತೆಯ ಮೇಲೆ ಅಭಿಮಾನದಿಂದ ಮತ್ತು ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಅದೇಶದಂತೆ ಹಲವು ಶಾಸಕರಿಗೆ ಸಚಿವರಾಗುವ ಭಾಗ್ಯವನ್ನು ನೀಡಿದ್ದರು.
ಸಿದ್ದರಾಮಯ್ಯನವರ ಅಭಿಮಾನಿಗಳು ಅಗಸ್ಟ್ 3 ರಂದು ದಾವಣಗೆರೆಯಲ್ಲಿ ಆಯೋಜಿಸಿರುವ ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಸಿದ್ದರಾಮಯ್ಯ ಅಭಿಮಾನಿಗಳು, ಹಿತೈಷಿಗಳು ಮತ್ತು ಆಸ್ಕರ್ ಫೆರ್ನಾಂಡಿಸ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು, ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ಪ್ರಮುಖರಾದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ ನಾಗರಾಜ್, ಮಹಮ್ಮದ್ ಶ್ರೀಶ್, ರೋಹನ್ ಮೊಂತೇರೋ, ಎಂ ಎ ಗಫೂರ್, ನಾಗೇಶ್ ಕುಮಾರ್ ಉದ್ಯಾವರ, ಅರ್ವಿಂದ್ ಫೆರ್ನಾಂಡಿಸ್, ನವೀನ್ ಡಿಸೋಜ, ಡಿಯೋನ್ ಡಿಸೋಜ, ಮೆಲ್ವಿನ್ ಡಿಸೋಜ, ದಿಲೀಪ್ ಮತ್ತಿತರರು ಮನವಿ ಮಾಡಿದ್ದಾರೆ.
Im Proud to Join you and where and when to join Please let me know