ಧರ್ಮ ಸಮನ್ವಯತೆಗೆ ಡಾ.ವೀರೇಂದ್ರ ಹೆಗ್ಗಡೆ ಕೊಡುಗೆ ಅಪಾರ: ಅಜಿತ್ ಕುಮಾರ್ ಮಾಲಾಡಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನಗೊಳಿಸಿದ ಹಿನ್ನಲೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಮಾತೃ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಮಹಿಳಾ ಸದಸ್ಯೆಯರು ಹೆಗ್ಗಡೆಯವರ ನಿವಾಸ (ಬೀಡು) ನಲ್ಲಿ ಭೇಟಿ ಮಾಡಿ ಗೌರವ ಸಲ್ಲಿಸಿದರು.

ಸದಾ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಹೆಗ್ಗಡೆ ಅವರನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಗುರುತಿಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿರುವುದು ಅಭಿನಂದನಾರ್ಹ. ಧರ್ಮ ಸಮನ್ವಯತೆಗೆ ಹೆಗ್ಗಡೆ ಅವರ ಕೊಡುಗೆ ಮಹತ್ತರವಾದದು. ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮಕರಣ ಮಾಡಿರುವುದು ಸಮಾಜಕ್ಕೆ ಹೆಮ್ಮೆ ಹಾಗೂ ಸಂಭ್ರಮದ ವಿಚಾರವಾಗಿದೆ. ಇದರಿಂದ ತುಳುನಾಡಿಗೆ ಹರ್ಷ ತಂದಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ  ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ,  ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಶೆಟ್ಟಿ ಪೆರ್ಮುದೆ,  
ಕಾರ್ಯಕಾರಿ ಸಮಿತಿ ಸದಸ್ಯರಾದ ಜಯರಾಮ ಸಾಂತ, ವಸಂತ ಶೆಟ್ಟಿ, ರವೀಂದ್ರನಾಥ ಶೆಟ್ಟಿ,  ರತ್ನಾಕರ ಶೆಟ್ಟಿ ಎಕ್ಕಾರ್, ದಯಾನಂದ ಶೆಟ್ಟಿ ಮನವಳಿಕೆಗುತ್ತು  ಮುರಳೀಧರ ಶೆಟ್ಟಿ, ಮನೀಶ್ ರೈ, ಸಂತೋಷ್ ಶೆಟ್ಟಿ, ಆಶಾಜ್ಯೋತಿ ರೈ, ಸಬಿತಾ ಶೆಟ್ಟಿ, ಜಯಶೀಲ ಅಡ್ಯಂತಾಯ, ಜಯರಾಮ ಶೆಟ್ಟಿ ಬೆಳ್ತಂಗಡಿ, ರಘುರಾಮ ಶೆಟ್ಟಿ ಬೆಳ್ತಂಗಡಿ, ಸಂತೋಷ್ ಶೆಟ್ಟಿ, ಹರೀಶ್ ಶೆಟ್ಟಿ,  ಕಮಲಾಕ್ಷ ಶೆಟ್ಟಿ ಆಕಾಶಭವನ,  ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಸಂಚಾಲಕಿ ಶಾಲಿನಿ ಶೆಟ್ಟಿ, ಸಾರಿಕಾ ಭಂಡಾರಿ,  ಸಬಿತಾ ಚೌಟ, ಶರ್ಮಿಳಾ ಶೆಟ್ಟಿ, ಸುಜಯ ರೈ ಮೊದಲಾದವರು ಉಪಸ್ಥಿತರಿದ್ದು, ಡಾ ಹೆಗ್ಗಡೆ ಅವರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!