ಜೂನ್ 1ರಿಂದ ದೇವಸ್ಥಾನಗಳು ಓಪನ್, ಸದ್ಯಕ್ಕೆ ಮಸೀದಿ, ಚರ್ಚ್ ಬಂದ್!
ಬೆಂಗಳೂರು: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯಾಗಿರುವ ನಡುವೆಯೇ ಇದೀಗ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಜೂನ್ 1ರಿಂದ ಪೂಜೆ ಪುನಸ್ಕಾರ ನಡೆಸಲು ಕೆಲವೊಂದು ಷರತ್ತುಗಳೊಂದಿಗೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ಇನ್ನು ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಸ್ಥಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು
ಜೂನ್ 1ರಿಂದ ಭಕ್ತರು ಸಾಮಾಜಿಕ ಅಂತರ, ನೈರ್ಮಲತೆ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.
ಲಾಕ್ ಡೌನ್ ನಿಂದಾಗಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಇತ್ತೀಚೆಗಷ್ಟೇ ಆನ್ ಲೈನ್ ಸೇವೆ ಆರಂಭಿಸಿತ್ತು. ಹರಕೆ ಹೊತ್ತ ಭಕ್ತರಿಗೆ ಆನ್ ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದು ಕೋಟ ತಿಳಿಸಿದ್ದರು. ಇದೀಗ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು