ಶಿರ್ವ: ಪಿಲಾರು ಗ್ರಾಮದ ನವವಿವಾಹಿತ ನೇಣಿಗೆ ಶರಣು

ಶಿರ್ವ: ವಿಪರೀತ ಮದ್ಯಪಾನ ಮಾಡುತ್ತಿದ್ದ ನವವಿವಾಹಿತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಿಲಾರು ಗ್ರಾಮದ ಕುಡ್ತಕುಮೇರಿ ಎಂಬಲ್ಲಿ ಆ.23ರಂದು ನಡೆದಿದೆ.
ಪಡುಬೆಳ್ಳೆ ಪಾಂಬೂರು ನಿವಾಸಿ 27ವರ್ಷ ಪಾಂಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಜೀವನದಲ್ಲಿ ಮನನೊಂದು ನಿನ್ನೆ ಶೆಡ್ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!