ಉಡುಪಿ: ನಿರ್ಲಕ್ಷತನದಿಂದ ಆಟೋ ಚಲಾಯಿಸಿ, ಮರಣಕ್ಕೆ ಕಾರಣವಾದ ಆರೋಪಿಗೆ ಶಿಕ್ಷೆ

ಉಡುಪಿ, ಆ.24: ದುಡುಕು ಹಾಗೂ ನಿರ್ಲಕ್ಷತನನದಿಂದ ಆಟೋ ಚಲಾಯಿಸಿ, ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018 ನ. 12 ರಂದು ಸಂಜೆ 4.15 ರ ಸುಮಾರಿಗೆ ಉದ್ಯಾವರದ ಸಂಪತ್ ಕುಮಾರ್ ಎಂಬಾತನು ಡಯಾನ ಜಂಕ್ಷನ್‌ ನಿಂದ ಹಳೇ ತಾಲೂಕು ಆಫೀಸ್ ಕಡೆಗೆ ಏಕಮುಖ ಸಂಚಾರ ರಸ್ತೆಯಲ್ಲಿ ತನ್ನ ಆಟೋರಿಕ್ಷಾವನ್ನು ನಿರ್ಲಕ್ಷö್ಯತನದಿಂದ ಚಲಾಯಿಸಿ, ದ್ವಿಚಕ್ರ ವಾಹನ ಸವಾರ ಗಣೇಶ್ ಎಂಬಾತನಿಗೆ ಡಿಕ್ಕಿ ಹೊಡೆದ ಪರಿಣಾಮ, ಗಣೇಶ್ ಅವರು ರಸ್ತೆಗೆ ಬಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗೊಂಡು ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಸಂಪತ್ ಕುಮಾರ್‌ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 18000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!