ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ-ಮೂವರು ವಶಕ್ಕೆ

ಮಣಿಪಾಲ ಆ.26 (ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ ಇತರ ಸಿಬ್ಬಂದಿಗಳೊಂದಿಗೆ ಆ.24 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶೀಂಬ್ರ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಂಡಿ ಅಕ್ಷಯ್ (19) , ಶ್ರೀರಾಗ (20) ಎಂಬ ಇಬ್ಬರು ಹಾಗೂ ಅನಂತನಗರದ ಉಡುಪಿ ಗ್ರೂಪ್ ಆಫ್ ಇನಸ್ಟಿಟ್ಯೂಶನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪಾರ್ಥಿವ್ (20) ಎಂಬಾತನನ್ನು ಅಮಲಿನಲ್ಲಿದ್ದಂತೆ ಕಂಡು ಬಂದ ಹಿನ್ನೆಲೆ ವಶಕ್ಕೆ ಪಡೆದು, ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ಮೂವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಅವರು ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!