ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ- ಉಡುಪಿ ಜಿಲ್ಲಾ ಬಿಜೆಪಿ ಸಭೆ
ಉಡುಪಿ ಆ.26(ಉಡುಪಿ ಟೈಮ್ಸ್ ವರದಿ): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಡೆಯಲಿರುವ ಸಮಾವೇಶದ ಪೂರ್ವ ಸಿದ್ಧತಾ ಸಭೆ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು.
ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.