ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್’ಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಕೊಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ.

ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


 

Leave a Reply

Your email address will not be published. Required fields are marked *

error: Content is protected !!