ಮಣಿಪಾಲ ಗಾಂಜಾ ಸೇವನೆ- ಮುಂದುವರಿದ ದಾಳಿ: ಮೂವರು ವಶಕ್ಕೆ

ಮಣಿಪಾಲ ಆ.27(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಯುವಕರು ಗಾಂಜಾ ಸೇವಿಸಿರುವಂತೆ ಕಂಡು ಬಂದ ಹಿನ್ನೆಲೆಯಲ್ಲಿ ಶಿವಳ್ಳಿ ಗ್ರಾಮದ ಅನಂತ ನಗರ ಉಡುಪಿ ಗ್ರೂಪ್ ಆಫ್ ಇನ್ಟಿಟ್ಯೂಶನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಣಿಪಾಲದ ನಿವಾಸಿ ಕೇರಳದ ಕಾಸರಗೋಡು ಜಿಲ್ಲೆಯ ಮುಹಮ್ಮದ್ ಶಾಕಿರ್ ಸಿ (22), ಪೆರಂಪಳ್ಳಿ ಶೀಂಬ್ರ ಸೇತುವೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಶ್ವಲ (20), ಹೆರ್ಗಾ ಗ್ರಾಮದ ಈಶ್ವರ ನಗರದ ಸಾರ್ವಜನಿಕ ಸ್ಥಳದಲ್ಲಿ ಈಶ್ವರ ನಗರದ ನಿವಾಸಿ ಮಹಾರಾಷ್ಟ್ರ ಮೂಲದ ದರ್ಶ್ ಕುಮಾರ್ ಜಾವುರ್ (18) ಎಂಬ ಮೂವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವೈದ್ಯರು ಈ ಮೂವರ ಬಗ್ಗೆ ನೀಡಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಇವರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!