ಉದ್ಯಾವರ: ಆ.29 ರಂದು ‘ಸಂಗಮ ಸೇವಾ ಸಹಕಾರ ಸಂಘ’ ಉದ್ಘಾಟನೆ
ಉಡುಪಿ, ಆ.27(ಉಡುಪಿ ಟೈಮ್ಸ್ ವರದಿ): ಉದ್ಯಾವರದ ಸಂಪಿಗೆ ನಗರದ ಕಾರ್ತಿಕ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ರಚನೆಗೊಂಡಿರುವ ‘ಸಂಗಮ ಸೇವಾ ಸಹಕಾರ ಸಂಘ‘ದ ಕಚೇರಿಯ ಉದ್ಘಾಟನಾ ಸಮಾರಂಭ ಆ. 29ರಂದು ಸಂಜೆ 4:30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಗಣೇಶ್ ಕುಮಾರ್ ಸಂಪಿಗೆನಗರ ಅವರು ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಹಿತಿ ನೀಡಿದ ಅವರು, ನೂತನ ಕಚೇರಿಯನ್ನು ಉಡುಪಿ ಶಾಸಕ ರಘುಪತಿ ಭಟ್ ಅವರು ಉದ್ಘಾಟಿಸಲಿದ್ದಾರೆ. ಕುತ್ಪಾಡಿಯ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಟ್ರಸ್ಟಿ ಸುಬ್ರಹ್ಮಣ್ಯ ಪಡಿತ್ತಾಯ ಅವರು ದೀಪ ಬೆಳಗಿಸಿ ಸಂಘಕ್ಕೆ ಶುಭ ಹಾರೈಸಲಿದ್ದಾರೆ. ಕಾಪು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಅವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಹಾಗೂ ಈ ವೇಳೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಠೇವಣಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಗಣಕಯಂತ್ರಕ್ಕೆ ಚಾಲನೆ ನೀಡಲಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು ಷೇರು ಸರ್ಟಿಫಿಕೇಟ್ ಹಸ್ತಾಂತರಿಸಲಿದ್ದಾರೆ. ಈ ವೇಳೆ ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಲಾಕರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಉಡುಪಿ ಸಹಕಾರ ಸಂಘಗಳ ಉಪನಿಬಂಧಕ ಜಿ.ಎನ್.ಲಕ್ಷ್ಮಿನಾರಾಯಣ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ ಆರ್, ಮಲ್ಪೆ ಉದ್ಯಮಿ ಹರಿಯಪ್ಪ ಕೋಟ್ಯಾನ್, ಮಲ್ಪೆ ಮತ್ಸ್ಯೋದ್ಯಮಿ ಸಾಧು ಸಾಲಿಯನ್, ಮಲ್ಪೆ ಪರ್ಸಿನ್ ಬೋಟ್ ಮಾಲಕರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್, ಉಡುಪಿ ಉದ್ಯಮಿ ಸಾಧಿಕ್ ಅಹ್ಮದ್, ಉಡುಪಿಯ ಗಿರಿಜಾ ಸರ್ಜಿಕಲ್ಸ್ ನ ಮಾಲಕ ರವೀಂದ್ರ ಶೆಟ್ಟಿ ಕಡೆಕಾರ್, ಸಮಾಜ ಸೇವಕ ರೋಯ್ಸ್ ಫೆರ್ನಾಂಡಿಸ್ ಅವರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.