ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣೆಯ ದಿನಾಂಕ ನಿಗದಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ಕ್ಕೆ ಚುನಾವಣೆ ನಿಗದಿಯಾಗಿದೆ ಎಂದು ಮಾಹಿತಿಯೊಂದು ತಿಳಿಸಿದೆ.

ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಆರೋಗ್ಯ ತಪಾಸಣೆಗಾಗಿ ಲಂಡನ್‌ಗೆ ತೆರಳಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಲ್ಲಿಂದಲೇ ವರ್ಚುವಲ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದಾರೆ.

ಒಮ್ಮತದ ಅಭ್ಯರ್ಥಿ ಆಯ್ಕೆ ವಿಫಲವಾದ ಕಾರಣ ಚುನಾವಣೆ ಮತ್ತೆ ಸುಮಾರು ಮೂರು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!