ಉಡುಪಿ: ವ್ಯವಹಾರದಲ್ಲಿ ನಷ್ಟ ಕಡೆಕಾರ್ ನಿವಾಸಿ ನೇಣಿಗೆ ಶರಣು
ಉಡುಪಿ: ಆರ್ಥಿಕ ಮುಗ್ಗಟ್ಟಿನಿಂದ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊರ್ವರು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಮೇಶ್ ಹೆಗ್ಡೆ(54) ಆತ್ಮಹತ್ಯೆ ಮಾಡಿಕೊಂಡವರು. ಗೋವಾದಲ್ಲಿ ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದ ಇವರು ಇತ್ತೀಚೆಗ ಕಡೆಕಾರಿನ ತಮ್ಮ ಮನೆಗೆ ಬಂದಿದ್ದರು.
ಖಿನ್ನತೆಗೆ ಒಳಗಾಗಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ಶೈಲೇಶ್ ಎಮ್. ಹೆಗ್ಡೆ ಎಂಬವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.