ಆಂತರಿಕ ಭದ್ರತೆಗೆ ಆಧುನಿಕ ತಂತ್ರಜ್ಞಾನ ಬಳಕೆ: ಎಡಿಜಿಪಿ ಭಾಸ್ಕರ್ ರಾವ್

ಉಡುಪಿ ಆಗಸ್ಟ್ 25 (ಉಡುಪಿ ಟೈಮ್ಸ್ ವರದಿ): ರಾಜ್ಯದ ಆಂತರಿಕ ಭದ್ರತೆಗೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ತಿಳಿಸಿದ್ದಾರೆ.


ಅವರು ಮಂಗಳವಾರ, ಮಲ್ಪೆಯ ಕರಾವಳಿ ಕವಲು ಪಡೆಯ ಕಚೇರಿಯಲ್ಲಿ ಮೀನುಗಾರ ಮುಖಂಡರೊದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಮೂಲಕ ರಾಜ್ಯದ ಅಂತರಿಕ ಭದ್ರೆತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕರಾವಳಿ ಕಾವಲು ಪಡೆಗೆ ಅಗತ್ಯ ಉಪಕರಣಗಳ ಖರೀದಿ, ಪ್ರತ್ಯೇಕ ಸಿಬ್ಬಂದಿ ನೇಮಕ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಿಬ್ಬಂದಿಗಳಲ್ಲಿ ದೈಹಿಕ , ತಾಂತ್ರಿಕ, ಎಮೋಷನಲ್ ದೃಡತೆ ಹೆಚ್ಚಿಸುವ ಮೂಲಕ , ಅವರ ಕಾರ್ಯ ಕ್ಷಮತೆ ಹೆಚ್ಚಿಸಲು ಸಹ ವಿಶೇಷ ತರಬೇತಿ ನೀಡಲಾಗುತ್ತಿದ್ದು, ಕರಾವಳಿಯ ರಕ್ಷಣೆಗೆ 3 ಹೊಸ
ಜೆಟ್ ಸ್ಕೀ ಗಳನ್ನು ಶೀಘ್ರದಲ್ಲಿ ಸರಬರಾಜು ಮಾಡಲಾಗುವುದು ಎಂದು ಭಾಸ್ಕರ್ ರಾವ್ ಹೇಳಿದರು.


ಸಾಮಾಜಿಕ ಜಾಲತಾಣಗಳ ಮೂಲಕ ಆಂತರಿಕ ಭದ್ರತೆಗೆ ಅಡ್ಡಿಪಡಿಸುವವರನ್ನು, ಇಲಾಖೆಯ ಸೋಷಿಯಲ್ ಮೀಡಿಯಾ ಸೆಲ್ ಮೂಲಕ ಪತ್ತೆ ಮಾಡಿ, ಕ್ರಮ ಕೈಗೊಳ್ಳಲಾಗುವುದು , ದೇಶವಿರೋದಿ ಚಟುವಟಿಕೆ ನಡೆಸುವವರನ್ನು ಪತ್ತೆ ಹಚ್ಚಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸಮುದ್ರದಲ್ಲಿ ಮೀನುಗಾರಿಕಗೆ ಹೋಗುವವರು ಮತ್ತು ಬರುವವರ ಖಚಿತ ಮಾಹಿತರಿಗಾಗಿ ಚಿಪ್ ಆಧಾರಿತ ತಂತ್ರಜ್ಞಾನ ಬಳಕೆ ಮಾಡಲಾಗುವುದು, ಮೀನುಗಾರರ ರಕ್ಷಣೆಗೆ ಜೊತೆಗೆ ಸಮುದ್ರದದಲ್ಲಿನ ಜೀವ ವೈವಿದ್ಯ ರಕ್ಷಣೆಗೆ ಸಹ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ರಾಜ್ಯದಲ್ಲಿನ 43 ಬೀಚ್ ಗಳಿಗೆ ಸೂಕ್ತ ಭದ್ರತೆ ನೀಡುವುದರ ಮೂಲಕ ರಾಜ್ಯದ
322 ಕಿಮೀ ವ್ಯಾಪ್ತಿಯ ಕರಾವಳಿಯಲ್ಲಿ ಆಂತರಿಕ ಭದ್ರತೆ ಮಾಡಲಾಗುವುದು, ಈಗಾಗಲೇ ಕರಾವಳಿ ಕಾವಲು ಪಡೆಯ ಜೊತೆಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಒಳಗೊಂಡ ಕರಾವಳಿ ನಿಯಂತ್ರಣ ದಳ ಹಾಗೂ ಸ್ಥಳಿಯ ಮೀನುಗಾರರನ್ನು ಒಳಗೊಂಡ ಸಾಗರ ರಕ್ಷಕ ದಳ ವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!