ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು
ಬೆಂಗಳೂರು ಆ.29 : ತಮ್ಮ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಬಿಜೆಪಿ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ‘ಭರತನಗರಿ’ ಎಂಬ ಕಾದಂಬರಿಯಲ್ಲಿ ಬರಗೂರು ರಾಮಚಂದ್ರಪ್ಪ ಅವರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಾಗೂ ಕಾದಂಬರಿಯಲ್ಲಿ ರಾಷ್ಟ್ರದ ಬಗ್ಗೆ, ರಾಷ್ಟ್ರಗೀತೆಯ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದೆ. ದೇಶದ ಬಗ್ಗೆ ಕೆಟ್ಟ ಪದಗಳನ್ನು ಬರೆದಿದ್ದು, ರಾಷ್ಟ್ರಗೀತೆ ರಾಷ್ಟ್ರಧ್ವಜದ ಬಗ್ಗೆ ಅಪಮಾನ ಮಾಡಿದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾದಂಬರಿಯನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.