ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಏರಿಕೆ- ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್‌ ಮಾಲ್‌ಗಳು, ಬಸ್‌, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ ಆಚರಿಸುವುದು ಸೂಕ್ತ. ಜನರ ದೇಹದ ತಾಪಮಾನ ಪರೀಕ್ಷೆ ನಡೆಸಲು ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ ವ್ಯವಸ್ಥೆ ಅಳವಡಿಸಬೇಕು. ಸ್ಯಾನಿಟೈಸರ್‌ ಒದಗಿಸಬೇಕು. ಒಳಾಂಗಣದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!