ಉಡುಪಿ: ಗಣೇಶೋತ್ಸವದಲ್ಲಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಬಾಂಧವರ ಸಮಾಗಮ
ಉಡುಪಿ ಸೆ.1(ಉಡುಪಿ ಟೈಮ್ಸ್ ವರದಿ): ಕಟಪಾಡಿ ಹಾಗೂ ಉದ್ಯಾವರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ಹಿಂದೂ ಬಾಂಧವರ ಜೊತೆಗೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಬಾಂಧವರು ಪಾಲ್ಗೊಳ್ಳುವ ಮೂಲಕ ಸೌಹಾರ್ಧಯುತವಾಗಿ ಆಚರಿಸಲಾಯಿತು.
ಕಟಪಾಡಿಯ ಮೂಡಬೆಟ್ಟು ಸರ್ಕಾರಿಗುಡ್ಡೆ ಸಾರ್ವಜನಿಕ ಗಣೇಶ ಚತುರ್ಥಿಯ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಗ್ರಾಮದ ಊರಿನ ಮುಸ್ಲಿಂ ಬಾಂಧವರು ಸಿಹಿ ತಿಂಡಿ ಹಾಗೂ ತಂಪು ಪಾನೀಯಗಳನ್ನು ಹಂಚಿ ಗಣೇಶೋತ್ಸವದ ಸಂಭ್ರಮಾಚರಣೆಯನ್ನು ಸೌಹಾರ್ಧತೆಯಿಂದ ಆಚರಿಸಿದರು.
ಮತ್ತೊಂದೆಡೆ ಇಪ್ಪತ್ತೈದು ವರ್ಷಕ್ಕೂ ಅಧಿಕ ಇತಿಹಾಸವಿರುವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉದ್ಯಾವರ ಮತ್ತು ಫ್ರೆಂಡ್ಸ್ ಗಾರ್ಡನ್ ಆರೂರು ತೋಟ ಸಂಪಿಗೆ ನಗರದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಧರ್ಮಗುರುಗಳು ಮತ್ತು ಕ್ರೈಸ್ತ ಬಾಂಧವರು ಭಾಗವಹಿಸಿ ಸೌಹಾರ್ದತೆ ಮೆರೆದರು.
ಸದಾ ಸೌಹಾರ್ದತೆಯಿಂದ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊ ಮತ್ತು ಸಹಾಯಕ ಧರ್ಮಗುರು ವಂ. ಲಿಯೋ, ಪ್ರವೀಣ್ ಡಿಸೋಜ ಅವರು ಭಾಗವಹಿಸಿದ್ದರು ಹಾಗೂ ಹಿಂದೂ ಸಮಾಜ ಬಾಂಧವರಿಗೆ ಶುಭ ಹಾರೈಸಿ, ಗೌರವ ಸ್ವೀಕರಿಸಿದರು.
ಗಣೇಶೋತ್ಸವದ ಸಮಾರಂಭದಲ್ಲಿ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜ, 20 ಆಯೋಗಗಳ ಸಂಯೋಜಕರಾದ ಜೆರಾಲ್ಡ್ ಪಿರೇರಾ, ಸೌಹಾರ್ದ ಸಮಿತಿಯ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ, ರೊನಾಲ್ಡ್ ಡಿಸೋಜ, ರೋಯ್ಸ್ ಫೆನಾರ್ಂಡಿಸ್, ಜೋನ್ ಗೋಮ್ಸ್, ಅನಿಲ್ ಡಿಸೋಜ, ಸುನಿಲ್ ಡಿಸೋಜ, ಸ್ಟೀವನ್ ಕುಲಾಸೊ ಮತ್ತಿತರರು ಭಾಗವಹಿಸಿ ಇಲ್ಲಿನ ಸೌಹಾರ್ಧತೆಗೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಮತ್ತು ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ, ಫ್ರೆಂಡ್ಸ್ ಗಾರ್ಡನ್ ಅರೂರುತೋಟ ಇಲ್ಲಿಯ ಪ್ರಮುಖರಾದ ದಿನೇಶ್ ಜತ್ತನ್ನ, ಪ್ರದೀಪ್ ಸುವರ್ಣ, ಯೋಗೀಶ್ ಕೋಟ್ಯಾನ್, ಹರೀಶ್ ಕುಮಾರ್ ಸೌಂದರ್ಯ, ಗಣೇಶ್ ಕುಮಾರ್, ರಿಯಾಝ್ ಪಳ್ಳಿ, ಗಿರೀಶ್ ಕುಮಾರ್, ಉದ್ಯಾವರ ಯುವಕ ಮಂಡಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರಾದ ಚೇತನ್ ಕುಮಾರ್ ಪಿತ್ರೋಡಿ, ಪ್ರಸಾದ್, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Where were all these when the Hijab controversy was ignited in the same UDUPI