ಶಿರ್ವ: ಅನಾರೋಗ್ಯದ ಚಿಂತೆ- ವ್ಯಕ್ತಿ ಆತ್ಮಹತ್ಯೆಗೆ ಶರಣು
ಶಿರ್ವ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದ ತೊಟ್ಲಗುರಿ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ.
ಮೃತರನ್ನು ಶಿರ್ವ ಗ್ರಾಮದ ತೊಟ್ಲಗುರಿ ನಿವಾಸಿ 40ವರ್ಷದ ರಮೇಶ ಎಂದು ಗುರುತಿಸಲಾಗಿದೆ. ಇವರು ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್ದರು. ಇವರು ಇದೇ ಚಿಂತೆಯಲ್ಲಿ ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮಾಡಿನ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.