ಉಡುಪಿ ಸೆ.2 (ಉಡುಪಿ ಟೈಮ್ಸ್ ವರದಿ): ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಅಗಮಿಸುತ್ತಿರುವ ಹಿನ್ನಲೆಯಲ್ಲಿ ಸಂಚಾರದಲ್ಲಿ ಮಾರ್ಪಾಟು ಮಾಡಲಾಗಿದೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳಿಗೆ ಪಡುಬಿದ್ರಿಯಿಂದ ಕಾರ್ಕಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.