ಪ್ರಧಾನಿಯವರೇ ರಾಜ್ಯ ಸರಕಾರದ 40% ಕಮಿಷನ್ ದಂಧೆ ಕುರಿತು ಮಾತನಾಡುವಿರಾ- ದಿನೇಶ್ ಗುಂಡೂರಾವ್

ಬೆಂಗಳೂರು, ಸೆ.2: ಮೋದಿಯವರೆ ಇಂದಾದರೂ ಹೇಳಿದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ.?”, ರಾಜ್ಯ ಬಿಜೆಪಿ ಸರಕಾರದ 40% ಕಮಿಷನ್ ದಂಧೆ, ಹಗರಣಗಳ ಕುರಿತು ಮಾತನಾಡುವಿರಾ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ಬಗ್ಗೆ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ ಅವರು, “ಇಂದು ಮಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ. ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು. ಮೋದಿಯವರೆ ಇಂದಾದರೂ ಹೇಳಿದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ  ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ.?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆ, ಪಿ.ಎಸ್.ಐ ಹಗರಣ, ಕೆಪಿಟಿಸಿಎಲ್ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಚನ ವಂಚನೆಯ ಬಗ್ಗೆ ಮಾತಾಡುವಿರಾ.? ನಿಮ್ಮ ಪಾರದರ್ಶಕತೆಗೆ ಸವಾಲು ಇದು.” ಎಂದು ಹೇಳಿದ್ದಾರೆ.

“ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಜಿಎಸ್‍ಟಿ ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ ? 2014ರಲ್ಲಿ 52 ಲಕ್ಷ ಕೋಟಿ ರೂ. ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು ಯಾಕೆ.? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ.?” ಎಂದು ಪ್ರಶ್ನಿಸಿದ್ದಾರೆ.

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ.? ರೂ.80 ಇದ್ದ ಅಡುಗೆ ಎಣ್ಣೆ ರೂ.180ರ ಗಡಿ ದಾಟಿದ್ದು ಯಾಕೆ.? ರೂ.400 ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ? ರೂ.30 ಇದ್ದ ಸಾಬೂನು ರೂ.60 ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ ಸರ್ಕಾರ ಜಿಎಸ್‍ಟಿ ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ.?

ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ಪಿಎಂ ಕೇರ್ ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು? ಬಿಜೆಪಿ ಯವರ ಮೇಲೆ ಇಡಿ, ಐಟಿ ಮತ್ತು ಸಿಬಿಐ ದಾಳಿ ನಡೆಯದ ರಹಸ್ಯವೇನು.? ರೈತರ ಸಾಲ ಮನ್ನಾ ಮಾಡದೆ ಕಾಪೆರ್Çರೇಟ್ ಕುಳಗಳ ಲಕ್ಷ ಲಕ್ಷ ಕೋಟಿ ರೂ. ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ.? ಎಂದು ಸವಾಲೆಸೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!