ಕುಂದಾಪುರ: 4 ಲಾರಿ ಸಹಿತ 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ

ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ.

ಉಡುಪಿ ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಇಂದು ಮುಂಜಾನೆ ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ರಾತ್ರಿ ಬಂದ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆೆ ದಾಳಿ ನಡೆಸಿ ಮತ್ತು 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇನ್ನೊಂದ ಪ್ರಕರಣದಲ್ಲಿ ಸಾರ್ವಜನಿಕರ ಮಾಹಿತಿ ಮೇರೆಗೆ ಕುಂದಾಪುರ ತಾಲೂಕು ಆಲೂರು ಗ್ರಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದ ಮೂರು ಲಾರಿ ಮತ್ತು 14 ಮೆಟ್ರಿಕ್‌ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿ ಪರಿಸರದಲ್ಲಿ ಬೆಳಗ್ಗೆ 8 ಗಂಟೆಗೆ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಚಾಲಕ ಯೋಗೇಶ್ವರ್ ಶೆಟ್ಟಿಗಾರ್ ಸಹಕರಿಸುತ್ತಾರೆ. ಭೂವಿಜ್ಞಾನಿಯವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವ ವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ನಾಲ್ಕು ವಾಹನಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

Leave a Reply

Your email address will not be published. Required fields are marked *

error: Content is protected !!