ರಸ್ತೆ ಅಪಘಾತ: ಟಾಟಾ ಸನ್ಸ್ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ಮೃತ್ಯು

ಮುಂಬೈ: ಟಾಟಾ ಸನ್ಸ್ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ(54) ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. 

ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ ನಿಂದ ಮುಂಬೈಗೆ ಸಂಚರಿಸುತ್ತಿದ್ದರು. ಸೂರ್ಯ ನದಿಯ ಸೇತುವೆಯಲ್ಲಿ 3.15ರ ಹೊತ್ತಿಗೆ ಅವಘಡ ಸಂಭವಿಸಿದೆ ಎಂದು ಪಾಲ್ಘರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಳಾ ಸಾಹೇಬ್ ಪಾಟೀಲ್ ತಿಳಿಸಿದ್ದಾರೆ. 

ಘಟನೆಯಲ್ಲಿ ಮಿಸ್ತ್ರಿ ಜೊತೆ ಸಂಚರಿಸುತ್ತಿದ್ದ ಕಾರು ಚಾಲಕ ಸೇರಿದಂತೆ ಇನ್ನಿಬ್ಬರು ಗಾಯಗೊಂಡಿದ್ದಾರೆ.  

Leave a Reply

Your email address will not be published. Required fields are marked *

error: Content is protected !!