ಮಠದ ಕೋಣೆಯಲ್ಲೇ ಸ್ವಾಮೀಜಿಯೋರ್ವರು ನೇಣಿಗೆ ಶರಣು

ಬೆಳಗಾವಿ ಸೆ.5: ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವಸಿದ್ಧಲಿಂಗ ಸ್ವಾಮೀಜಿ ಅವರು ಮಠದ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಯಾವ ಕಾರಣ ನೀಡಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರ ನಡುವಿನ ಟೆಲಿಫೋನ್‌ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡುತ್ತಿದ್ದರು. ಈ ಸಂಭಾಷಣೆಯಲ್ಲಿ ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಓರ್ವ ಮಹಿಳೆ ಆರೋಪಿಸಿದ್ದು, ಈ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆದರೆ, ಪ್ರಕರಣದ ಸತ್ಯಾಂಶ ಪೊಲೀಸ್ ತನಿಖೆ ಬಳಿಕವೇ ತಿಳಿದು ಬರಬೇಕಿದೆ

Leave a Reply

Your email address will not be published. Required fields are marked *

error: Content is protected !!