ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ಎನ್ ಐಎ ದಾಳಿ
ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.
ಸ್ಥಳೀಯ ಠಾಣೆಯ ಪೊಲೀಸರ ಸಹಕಾರದೊಂದಿಗೆ ಎನ್.ಐ.ಎ.ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.
10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಮುಂಜಾನೆಯಿಂದಲೇ ತನಿಖೆ ಆರಂಭಿಸಿದ್ದಾರೆ.