ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ

ಬೆಳಗಾವಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು‌ ತಿಳಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ರಾತ್ರಿ 10ರ ಸುಮಾರಿಗೆ ಸಚಿವರಿಗೆ ಹೃದಯಾಘಾತವಾಗಿದ್ದು, ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಭೇಟಿ.

ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ದಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಉಮೇಶ್‌ ಕತ್ತಿ ನಿಧನ| ಶಾಂತವಾಯಿತು ‘ಉತ್ತರ’ದ ಧ್ವನಿ

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಸದ್ಗತಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಶ್ರೀ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.

‘ಸಚಿವ ಉಮೇಶ ಕತ್ತಿ  ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಭಗವಂತ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ  ಪ್ರಾರ್ಥಿಸುತ್ತೇನೆ’ ಎಂದು ಎಎಪಿ ನಾಯಕ ಪೃಥ್ವಿ ರೆಡ್ಡಿ ಉಲ್ಲೇಖಿಸಿದ್ದಾರೆ.

ರಾಜ್ಯ ಸಚಿವರಾದ ಉಮೇಶ ಕತ್ತಿ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಯಿತು.

ಭಗವಂತ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.

Leave a Reply

Your email address will not be published. Required fields are marked *

error: Content is protected !!