ಕಾರ್ಕಳ: ನಿಟ್ಟೆ ಯುವತಿ ನೇಣಿಗೆ ಶರಣು
ಕಾರ್ಕಳ ಸೆ.7: ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡವರು.
ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಆಗಿರುತ್ತದೆ. ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸಿದ್ದರು. ನಿನ್ನೆ ಮನೆಯ ಹಿಂಬದಿಯ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.