| ಉಡುಪಿ, ಸೆ.7: ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಹೆಬ್ರಿ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಎಂದು ಗುರುತಿಸಲಾಗಿದೆ.ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ವೇಗದೂತ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. | |