ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:ಎಸ್ಡಿಪಿಐ ನಾಯಕನ ಮನೆಗೆ ಎನ್ಐಎ ದಾಳಿ
ಬಂಟ್ವಾಳ, ಸೆ.8: ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಅಧಿಕಾರಿಗಳು ದಾಳಿ ನಡೆಸಿದ ಸುದ್ದಿ ತಿಳಿದು ಮನೆಯ ಎದುರು ಎಸ್.ಡಿ.ಪಿ.ಐ. ಪಕ್ಷದ ನೂರಾರು ಕಾರ್ಯಕರ್ತರು ಸ್ಥಳದಲ್ಲಿದ್ದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.