ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಉಡುಪಿ ಸೆ.9: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂದರ್ಶನ ಕರೆಯಲಾಗಿದೆ.

ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ವಿಭಾಗದ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆ.15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.

2 thoughts on “ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

Leave a Reply

Your email address will not be published. Required fields are marked *

error: Content is protected !!