ಕಾರ್ಕಳ/ಕುಂದಾಪುರ: ಮಾದಕ ವಸ್ತು ಸೇವನೆ ಪ್ರಕರಣ- ಇಬ್ಬರು ವಶಕ್ಕೆ
ಕಾರ್ಕಳ ಸೆ.9(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಹಾಗೂ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಹದತ್ (21) ಹಾಗೂ ವಿನಯ ನಾಯ್ಕ ಪೊಲೀಸರು ವಶಕ್ಕೆ ಪಡೆದವರು. ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಪೊಲೀಸರು ನಿಟ್ಟೆ ಗ್ರಾಮದ ನಿಟ್ಟೆ ಗರಡಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಶೆಯಲ್ಲಿ ತೇಲಾಡುತ್ತಿದ್ದ ಶಹದತ್ ಎಂಬಾತನನ್ನು ಹಾಗೂ ಕುಂದಾಪುರ ಪೊಲೀಸರು ಕುಂದಾಪುರ ತಾಲೂಕಿನ ಕಸಬ ಗ್ರಾಮದ ಫೇರಿ ರಸ್ತೆ ಬಳಿ ವಿನಯ ನಾಯ್ಕ ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರಿಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ. ಇವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಹಾಗೂ ಕುಂದಾಪುರ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.