ಪಡುಬಿದ್ರಿ: ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ

ಪಡುಬಿದ್ರಿ ಸೆ.10(ಉಡುಪಿ ಟೈಮ್ಸ್ ವರದಿ):ತಮಗಿದ್ದ ಮಾನಸಿಕ ಖಾಯಿಲೆಯಿಂದ ಮನನೊಂದು ವ್ಯಕ್ತಿಯೊಬ್ಬರು ಕೀಟನಾಶಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪುವಿನ ನಡ್ಸಾಲು ಗ್ರಾಮ ಪಡುಬಿದ್ರಿ ಬೀಡುವಿನಲ್ಲಿ ನಡೆದಿದೆ.

ರಾಘು ಜಿ ಶೆಟ್ಟಿ(75) ಆತ್ಮಹತ್ಯೆ ಮಾಡಿಕೊಂಡವರು.

ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟ ಮತ್ತು ಮಾನಸಿಕ ಖಾಯಲೆಯಿಂದ ಬಳಲುತ್ತಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮಧ್ಯಾಹ್ನದ ವೇಳೆ ತಮ್ಮ ಮನೆಯ ಹಿಂಬದಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥ ಗೊಂಡಿದ್ದರು. ಈ ವೇಳೆ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಮಗಳು ಚೇತನಾ ಮನೋಜ್ ಗಾಂಭೀರ್ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ :080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.


Leave a Reply

Your email address will not be published. Required fields are marked *

error: Content is protected !!