ಸಾಲಿಗ್ರಾಮ: ಮಾದಕ ವಸ್ತು ಸೇವನೆ-ಮೂವರು ಸೆನ್ ಪೊಲೀಸ್ ವಶಕ್ಕೆ
ಉಡುಪಿ ಸೆ.11(ಉಡುಪಿ ಟೈಮ್ಸ್ ವರದಿ): ಸಾಲಿಗ್ರಾಮದ ಪರಿಸರದಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿಯನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಅಪರಾಧ ಪೊಲೀಸರು ಸೆ.9 ರಂದು ಸಾಲಿಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಉಪಾಧ್ಯಾಯ,
ಆದಂ, ತಬ್ರೇಜ್ ಎಂಬ ಮೂವರನ್ನು ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢ ಪಟ್ಟ ಹಿನ್ನೆಲೆಯಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.