ಕಾಪು: ಮಟ್ಕಾ ಜುಗಾರಿಗೆ ಹಣ ಸಂಗ್ರಹಿಸುತ್ತಿದ್ದ ದಿನೇಶ್ ಶೆಟ್ಟಿ ಬಂಧನ
ಪಡುಬಿದ್ರಿ ಸೆ.11(ಉಡುಪಿ ಟೈಮ್ಸ್ ವರದಿ): ಕಾಪುವಿನ ಸಾಂತೂರು ಗ್ರಾಮದ ಮುದರಂಗಡಿಯ ಮೀನು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ಶೆಟ್ಟಿ ಬಂಧಿತ ಆರೋಪಿ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಕಾಪುವಿನ ಸಾಂತೂರು ಗ್ರಾಮದ ಮುದರಂಗಡಿಯ ಮೀನು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ, ಸ್ಥಳದಲ್ಲಿ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಾ ಹಣ ಸಂಗ್ರಹಿಸುತ್ತಿದ್ದ ದಿನೇಶ್ ಶೆಟ್ಟಿ ಎಂಬಾತನನ್ನು ಬಂಧಿಸಿ, ಅವನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು 1,050 ರೂ. ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.