ಎಲೆಕ್ಟ್ರಿಕ್ ವಾಹನದ ಶೋ ರೂಮ್’ನಲ್ಲಿ ಬ್ಯಾಟರಿ ಸ್ಫೋಟ- 8 ಸಾವು,10ಮಂದಿಗೆ ಗಾಯ

ಹೈದರಾಬಾದ್ ಸೆ.13: ಸಿಕಂದರಾಬಾದ್ ನ ಹೋಟೆಲ್ ವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 8 ಜನ ಮೃತಪಟ್ಟು ಹಲವರು ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಅಗ್ನಿ ದುರಂತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್ ಗೂ ಬೆಂಕಿ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ. ರಕ್ಷಣಾ ಸಿಬ್ಬಂದಿಗಳು ಹೋಟೆಲ್ ನಲ್ಲಿದ್ದ ಹಲವರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!