ಮೂರು ಮೊಬೈಲ್ ಖರೀದಿಸಿದ ಅದೃಷ್ಟ ಗ್ರಾಹಕನಿಗೆ ಬಂತು ಗೋಳಿಬಜೆ!

ಉಪ್ಪಿನಂಗಡಿ ಸೆ.13: ಅದೃಷ್ಟ ಗ್ರಾಹಕರು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಬದಲು ಹಾಳಾದ ತಿಂಡಿ ಪೊಟ್ಟಣ ಕಳುಹಿಸಿ ವಂಚಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ದೇವಸ್ಥಾನವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗಷ್ಟೇ ತನ್ನ ಮನೆ ಮಂದಿಗೆಂದು ಮೂರು ವಿವೋ ಕಂಪೆನಿಯ ಮೊಬೈಲ್ ಫೋನ್ ಖರೀದಿಸಿದ್ದರು. ಇದರ ಬಳಿಕ ಸಂಸ್ಥೆಯ ಅಧಿಕಾರಿಯೆಂದು ಅವರ ಮೊಬೈಲ್ ಫೋನ್ ಗೆ ಕರೆಯೊಂದನ್ನು ಮಾಡಿದ ವ್ಯಕ್ತಿಯೋರ್ವರು “ಮೂರು ಮೊಬೈಲ್ ಖರೀದಿಸಿದ್ದಕ್ಕೆ ಸಂಸ್ಥೆಯ ಲಕ್ಕಿ ಗ್ರಾಹಕರಾಗಿ ನೀವು ಆಯ್ಕೆಯಾಗಿದ್ದೀರಿ. ಈ ಹಿನ್ನೆಲೆಯಲ್ಲಿ 8,800 ರೂ. ಬೆಲೆಯ ಮೊಬೈಲ್ ಫೋನ್ ಕೇವಲ 1,785  ರೂ.ಗೆ ಕಳುಹಿಸಲಾಗುವುದು. ಹಣ ತೆತ್ತು ಅಂಚೆ ಕಚೇರಿಯಿಂದ ಪಡೆದುಕೊಳ್ಳಿ’ ಎಂದು ತಿಳಿಸಿದ್ದರು.

ತಾನು ಫೋನ್ ಖರೀದಿಸಿರುವುದು ನಿಜವಾಗಿರುವಾಗ ನನಗೆ ಅದೃಷ್ಟ ಒಲಿದಿರುವುದು ನಿಜವಾಗಿರಬಹು ದೆಂದು ನಂಬಿದ ಭವಾನಿ ಶಂಕರ್ ನಿನ್ನೆ ಉಪ್ಪಿನಂಗಡಿ ಅಂಚೆ ಕಚೇರಿಗೆ ಬಂದ ಪಾರ್ಸೆಲ್ ಅನ್ನು  ಹಣ ತೆತ್ತು ಪಡೆದುಕೊಂಡರಲ್ಲದೆ, ಸಂದೇಹ ಬಗೆಹರಿಸಲು ಅಲ್ಲಿಯೇ ಪಾರ್ಸೆಲ್ ಅನ್ನು ತೆರೆದು ನೋಡಿದಾಗ ಕೆಟ್ಟು ಹೋದ ತಿಂಡಿಯ ಪೊಟ್ಟಣವನ್ನು ಪ್ಯಾಕ್ ಮಾಡಿ ಕಳುಹಿಸಿರುವುದು ಕಂಡು ಬಂದಿದೆ.

ಬಳಿಕ ತಾನು ಮೋಸ ಹೋಗಿರುವುದು ತಿಳಿದು ಬಂದಿದ್ದು ಈ ಬಗ್ಗೆ ಮಾಹಿತಿ ಹಂಚಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!