ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್- ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು ಸೆ.13: ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದು ರಾಜ್ಯ ಕಾಂಗ್ರೆಸ್ ಸರಕಾರದ ಬಗ್ಗೆ ವ್ಯಂಗ್ಯವಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ನಿಮ್ಮ ಸರ್ಕಾರದ 40 % ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು ಬಸವರಾಜ ಬೊಮ್ಮಾಯಿ ಅವರೇ, ಇದೇ ರಸ್ತೆಯ ಮೇಲೆ ಬಂದು “ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ” ಎಂದು ಭಾಷಣ ಮಾಡಿದ್ದ ನರೇಂದ್ರ ಮೋದಿ ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ ಎಂದು ಪ್ರಶ್ನಿಸಿದೆ. ಅಲ್ಲದೆ ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ವೇಳೆ ಹೊಸದಾಗಿ ಡಾಮರೀಕರಣ ಮಾಡಲಾದ ರಸ್ತೆ ಕಾರ್ಯಕ್ರಮ ನಡೆದ ಹತ್ತು ದಿನದಲ್ಲೇ ಸೇತುವೆಯಲ್ಲಿ ಗುಂಡಿ ಬಿದ್ದಿದ್ದು, ಈ ಚಿತ್ರವನ್ನು ಹಂಚಿಕೊಂಡು ‘ಇದು 40% ಕಮಿಷನ್ ಲೂಟಿಗೆ ಸಾಕ್ಷಿ’ ಎಂದು ಬರೆದುಕೊಂಡಿದೆ.
ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೆ.2 ರಂದು ಮಂಗಳೂರು ಭೇಟಿ ನೀಡುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಸೇತುವೆ ಮೇಲಿನ ಗುಂಡಿಗಳನ್ನು ಮುಚ್ಚುವ ಸಲುವಾಗಿ ಹಾಕಲಾಗಿತ್ತು. ಈ ರಸ್ತೆಯಲ್ಲಿ ಹಾಕಿದ್ದ ಡಾಂಬರು ಹತ್ತೇ ದಿನಗಳಲ್ಲಿ ಕಿತ್ತು ಹೋಗಿದ್ದು, ಸೇತುವೆಯಲ್ಲಿ ಗುಂಡಿ ಬಿದ್ದಿದೆ. ಈ ಚಿತ್ರವನ್ನು ರಾಜ್ಯಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಹಂಚಿಕೊಂಡು ‘ಇದು 40% ಕಮಿಷನ್ ಲೂಟಿಗೆ ಸಾಕ್ಷಿ’ ಎಂದು ಬರೆದುಕೊಂಡಿದೆ.