ಉಡುಪಿ: ದಿ.ಆಸ್ಕರ್ ಫೆರ್ನಾಂಡಿಸ್ ಪುತ್ಥಳಿ ಅನಾವರಣ
ಉಡುಪಿ: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾಂಗ್ರೆಸ್ ಭವನದ ಬಳಿ ನಿರ್ಮಿಸಿರುವ ಆಸ್ಕರ್ ಅವರ ಪುತ್ಥಳಿಯನ್ನು ಹಿರಿಯ ಕಾಂಗ್ರೆಸ್ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಐವನ್ ಡಿಸೋಜ, ರಮೇಶ್ ಕಾಂಚನ್, ಎಂ.ಎ.ಗಫೂರ್, ಕೃಷ್ಣಮೂರ್ತಿ ಆಚಾರ್ಯ, ಹರೀಶ್ ಕಿಣಿ, ಭಾಸ್ಕರ್ ರಾವ್ ಕಿದಿಯೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.