ಕಾರ್ಕಳ:ಹೆಸರಾಂತ ಸಾವಯವ ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಾರ್ಕಳ: ದುರ್ಗಾ ಗ್ರಾಮದ ನಿಲೆಬೆಟ್ಟು ಗುತ್ತು ಮನೆಯ ಸಾವಯವ ಕೃಷಿಕ,ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 14ರಂದು ಬೆಳಗ್ಗೆ ನಡೆದಿದೆ.

ಕಾರ್ಕಳದಲ್ಲಿ ಸಾವಯವ ಕೃಷಿಕರಾಗಿ ಹೆಸರುಗಳಿಸಿದ್ದ ಇವರು, ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಪತ್ನಿ ಅಡುಗೆ ಕೋಣೆಯಲ್ಲಿರುವಾಗ ಭಾಸ್ಕರ್ ಹೆಗ್ಡೆ ತನ್ನ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!