ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ
September 14, 2022
ಮಂಗಳೂರು : ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ.
ಇವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್ನ ಉಪಾಧ್ಯಕ್ಷರಾಗಿದ್ದಾರೆ.