ಶಿರ್ವ ಗ್ರಾಮ ಪಂಚಾಯತ್’ನ ನೂತನ ಅಧ್ಯಕ್ಷರಾಗಿ ರತನ್ ಶೆಟ್ಟಿ ಆಯ್ಕೆ
ಉಡುಪಿ ಸೆ.14(ಉಡುಪಿ ಟೈಮ್ಸ್ ವರದಿ): ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷ ಸ್ಥಾನ ತೆರವುಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷರಾಗಿದ್ದ ಕೆ.ಆರ್ ಪಾಟ್ಕರ್ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಪಂಚಾಯತ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.
ಈ ಚುನಾವಣೆಯ ಕಾಂಗ್ರೆಸ್ ಬೆಂಬಲಿತ 19 ಮಂದಿ ಹಾಗೂ ಬಿಜೆಪಿ ಬೆಂಬಲಿತ 15 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ನ 19 ಮತ ಹಾಗೂ ಬಿಜೆಪಿಯ ಓರ್ವ ಸದಸ್ಯರ ಅಡ್ಡ ಮತ ಪಡೆದು 20 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ 14 ಮತಗಳನ್ನು ಪಡೆದು ಪರಾಜಿತರಾಗಿದ್ದಾರೆ.
ರತನ್ ಕುಮಾರ್ ಶೆಟ್ಟಿ ಅವರು 3 ಬಾರಿ ಶಿರ್ವ ಗ್ರಾಮ ಪಂಚಾಯತ್ ನ ಸದಸ್ಯರಾಗಿದ್ದು, 2 ಬಾರಿ ಪದವು ವಾರ್ಡ್ ನ ಸದಸ್ಯರಾಗಿದ್ದರು, ಪ್ರಸ್ತುತ ಕುಡ್ತ ಮಜಲು ವಾರ್ಡ್ ನ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಪದವು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಚುನಾಣಾಧಿಕಾರಿಯಾಗಿ ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣೆಯ ಪ್ರಕ್ರಿಯೆ ನಡೆಸಿಕೊಟ್ಟರು.