ಮಸ್ಕತ್: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹೊಗೆ- ನಾಲ್ವರಿಗೆ ಗಾಯ
ಮಸ್ಕತ್ ಸೆ.14: ಕೊಚ್ಚಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ಪರಿಣಾಮ ವಿಮಾನದಿಂದ ಇಳಿಯುವ ಭರದಲ್ಲಿ ಹದಿನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವಿಮಾನದಲ್ಲಿ ಒಟ್ಟು 141 ಪ್ರಯಾಣಿಕರು ಮತ್ತು ಆರು ಮಂದಿ ಸಿಬ್ಬಂದಿಗಳು ಇದ್ದು ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ತಾಂತ್ರಿಕ ದೋಷದಿಂದ ದಟ್ಟ ಹೊಗೆ ಆವರಿಸಿಕೊಂಡಿದೆ.
ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಯುವಂತೆ ಸೂಚನೆ ನೀಡಲಾತ್ತು. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಕೆಳಗಿಳಿಯುವ ಬರದಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ.