ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ  ಅಬ್ದುಲ್ ಖಾದರ್ ಕುಕ್ಕಿಕಟ್ಟೆ

ಉಡುಪಿ ಸೆ.14 (ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ  ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ದಾವೂದ್ ಅಬೂಬಕ್ಕರ್ ಅವರು, ಈ ಹಿಂದೆ ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದ ಅಬ್ದುಲ್ ಮುತಾಲಿ ಅವರು ಈಗಾಗಲೇ ಉಡುಪಿ ಜಿಲ್ಲಾ ವಕ್ಛ್ ಬೋರ್ಡಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆ ಮೇರೆಗೆ ಉಪಾಧ್ಯಕ್ಷ ಸ್ಥಾನದಿಂದ ವಿಮುಕ್ತಿಗೊಳಿಸಲಾಗಿತ್ತು. ಬಳಿಕ ತೆರವಾದ ಸ್ಥಾನಕ್ಕೆ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!